ತುಮಕೂರು ರಿಂಗ್ ರಸ್ತೆಯಲ್ಲಿ ಭೀಕರ ಅಪಘಾತ : ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬೈಕ್ ಸವಾರ ದಾರೂಣ ಸಾವು

0
51

ತುಮಕೂರು | ರಸ್ತೆ ತಡೆಗೋಡೆಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್  ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ತುಮಕೂರು ನಗರದ ಶೆಟ್ಟಿಹಳ್ಳಿ ರಿಂಗ್ ರಸ್ತೆಯಲ್ಲಿ ನಡೆದಿದೆ.

ಮೊಹರಂ ಇತಿಹಾಸದ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ

ಮೃತ ಬೈಕ್ ಸವಾರನನ್ನು ರಂಗಸ್ವಾಮಿ ಎಂದು ಗುರುತಿಸಲಾಗಿದ್ದು, ಇವರು ಶ್ರೀ ಶಾರದಾ ಜಯರಾಮಪ್ಪ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮೂಲತಃ ಚಿಕ್ಕನಾಯಕನಹಳ್ಳಿ ತಾಲೂಕಿನ ಶಿಡ್ಲಕಟ್ಟೆ ಗ್ರಾಮದ ರಂಗಸ್ವಾಮಿ, ಕೆಲಸ ಮುಗಿಸಿ ರಾತ್ರಿ ಮನೆಗೆ ಹೋಗುವಾಗ ಈ ದುರಂತ ಸಂಭವಿಸಿದೆ. ಇನ್ನೂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.