ತುಮಕೂರು | ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೊರಟಗೆರೆ ತಾಲೂಕಿನ ಕಲ್ಲುಗುಟ್ಟರಹಳ್ಳಿ ಗ್ರಾಮದ ನಿವಾಸಿ ರಾಮಕೃಷ್ಣಪ್ಪ (65) ಎಂದು ಗುರುತಿಸಲಾಗಿದೆ.
ಕಾಂಗ್ರೆಸ್ ಭಸ್ಮಾಸುರ ನೀವು : ಸಿದ್ಧರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಮೃತ ರಾಮಕೃಷ್ಣಪ್ಪ ಕೊರಟಗೆರೆ ಪಟ್ಟಣಕ್ಕೆ ತೆರಳಲು ಜಂಪೇನಹಳ್ಳಿ ಕ್ರಾಸ್ ಬಳಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ತೋವಿನಕೆರೆ ಕಡೆಯಿಂದ ಅತಿ ವೇಗವಾಗಿ ಬಂದಂತಹ ದ್ವಿಚಕ್ರ ವಾಹನ ಏಕಏಕಿ ನಿಂತಿದ್ದ ರಾಮಕೃಷ್ಣಪ್ಪ ನವರಿಗೆ ಗುದ್ದಿದೆ.
ಬೈಕ್ ಗುದ್ದಿದ ರಬಸಕ್ಕೆ ರಾಮಕೃಷ್ಣಪ್ಪನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನೂ ರಾಮಕೃಷ್ಣಪ್ಪನ ಜೊತೆಯಲ್ಲಿದ್ದ ಸಂಬಂಧಿ ವಿಜಯ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲು ಮಾಡಲಾಗಿದೆ.
[…] […]
Comments are closed.