ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿದ್ಧರಾಮಯ್ಯ..!

1
38

ಬೆಂಗಳೂರು | ಜಾತ್ಯಾತೀತ ಜನತಾದಳದ ಹೆಚ್ ಡಿ ದೇವೆಗೌಡರ ಗರಡಿಯಲ್ಲಿ ಬೆಳೆದು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗಿ ಜನಪ್ರಿಯ ನಾಯಕನಾಗಿ ಗುರುತಿಸಿಕೊಂಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನು ಓದಿ | ಮ್ಯಾಸಿವ್ ಸ್ಟಾರ್ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ “ಗಜರಾಮ”ನ ಹೊಸ ಅವತಾರ..!

ರಾಜಕೀಯ ಸಾವಿರ ಇರುತ್ತದೆ ಅದನ್ನು ಹೊರತು ಪಡಿಸಿ, ಮಾನವೀಯತೆ, ಮನುಷ್ಯತ್ವ, ಪ್ರೀತಿ, ವಾತ್ಸಲ್ಯ ಎನ್ನುವುದನ್ನು ರೂಸಿಕೊಂಡಿರುವ ಯಾವುದೇ ವ್ಯಕ್ತಿಯಾದರೂ ಕಷ್ಟದ ಸಮಯದಲ್ಲಿ ಮಿಡಿಯುತ್ತಾನೆ, ಅದೇ ರೀತಿ ಸಿದ್ಧರಾಮಯ್ಯನವರು ಕೂಡ ಮಾಜಿ ಪ್ರಧಾನಿಗಳನ್ನು ಭೇಟಿ ಮಾಡಿ ಕುಶಲ ಕ್ಷೇಮ ವಿಚಾರಿಸುವ ಕೆಲಸ ಮಾಡಿದ್ದಾರೆ.

ಇದನ್ನು ಓದಿ | ಪಾಲಿ ಹೌಸ್ ನಿರ್ಮಾಣಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡುತ್ತಿದೆ ರೈತರಿಗೆ ಅನುದಾನ..!

ಈ ವೇಳೆ ಸಾಮಾಜಿಕ ಜಾಲತಾಣದಲ್ಲಿ ಫೋಟೊವನ್ನು ಹಂಚಿಕೊಂಡಿರುವ ಅವರು, “ಹಿರಿಯರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು. ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ಜಮೀರ್ ಅಹ್ಮದ್, ಮಾಜಿ ಶಾಸಕರಾದ ಅಶೋಕ ಪಟ್ಟಣ ಸೇರಿದಂತೆ ಹಲವರು ಈ ವೇಳೆ ನನ್ನೊಂದಿಗಿದ್ದರು”. ಎಂದು ಬರೆದುಕೊಂಡಿದ್ದಾರೆ.