ಹೂವಿನ ಕುಂಡದಲ್ಲಿ ಗಾಂಜಾ ಬೆಳೆದ ಅಟೋ ಚಾಲಕ

1
60

ತುಮಕೂರು | ಮನೆಯೊಂದರ ಹೂವಿನ ಕುಂಡಗಳಲ್ಲಿ ಬೆಳೆಸಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳುವಲ್ಲಿ ಗುಬ್ಬಿ ಪಟ್ಟಣದ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಟ್ಟಣದ ಜ್ಯೋತಿನಗರ ಬಡಾವಣೆಯ ಮನೆಯೊಂದರಲ್ಲಿ ಹೂವಿನ ಕುಂಡಗಳಲ್ಲಿ ಗಾಂಜಾ ಗಿಡಗಳನ್ನು ಬೆಳೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಗುಬ್ಬಿ ಮತ್ತು ಚೇಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.

ಕಾಲು ಜಾರಿ ಚೆಕ್ ಡ್ಯಾಮ್ ಗೆ ಬಿದ್ದ ಮಹಿಳೆ

ಈ ಸ್ಥಳಕ್ಕೆ ಗುಬ್ಬಿ ತಹಶೀಲ್ದಾರ್ ಬಿ ಆರತಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿ ಆಟೋ ಚಾಲಕ ಗಫರ್ ಆಲಿಖಾನ್ (42) ವಶಕ್ಕೆ ಪಡೆದು ಆತನ ಮೇಲೆ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣದ ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.