BIG NEWS | ತುಮಕೂರಿನಲ್ಲಿ ಹೈ ಅಲರ್ಟ್ : ಖಾಕಿ ಕಣ್ಗಾವಲಿನಲ್ಲಿ ಕಲ್ಪತರು ನಾಡು..!

0
41

ತುಮಕೂರು | ರಾಜ್ಯಾದ್ಯಂತ ಪಿಎಫ್ಐ, ಎಸ್ಡಿಪಿಐ ಸಂಘಟನೆ ಮುಖಂಡರ ಮನೆ ಮೇಲೆ ಎನ್ಐಎ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದು, ಇದೀಗ ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲೂ ಕೂಡ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಮುಂಜಾಗ್ರತಾ ಕ್ರಮ ಕೈಗೊಂಡಿರುವ ಪೊಲೀಸ್ ಪಡೆ, ಜಿಲ್ಲೆಯ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕಣ್ಗಾವಲು ಇರಿಸಿದೆ. ಮಾತ್ರವಲ್ಲದೆ ಹಿಂದೂ ದೇವಾಲಯ, ಮಸೀದಿ ಸೇರಿದಂತೆ ಧಾರ್ಮಿಕ ಕೇಂದ್ರಗಳ ಮೇಲೂ ನಿಗಾ ವಹಿಸಿದೆ.

ತುಮಕೂರು ಜಿಲ್ಲೆಯ ಎಲ್ಲಾ 10 ತಾಲೂಕುಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ರೀತಿಯ ಅವಘಡಗಳು ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಹುಲ್ ಕುಮಾರ್ ಶಹಪುರವಾಡ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here