BREAKING NEWS | ಅತ್ಯಾಚಾರಿ ಆರೋಪಿಗೆ ಶಿಕ್ಷೆ ಕೊಟ್ಟ ತುಮಕೂರಿನ ಘನ ನ್ಯಾಯಾಲಯ..!

0
47

ತುಮಕೂರು | ಬಟ್ಟೆ ತೊಳೆಯುತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದನಿಗೆ ಇದೀಗ ತುಮಕೂರಿನ ಘನ ನ್ಯಾಯಾಲಯ ಶಿಕ್ಷೆ ಪ್ರಕಟ ಮಾಡಿದ್ದು, ಅತ್ಯಾಚಾರಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಆರೋಪಿ ತುರುವೇಕೆರೆಯ ಸಮೀರುಲ್ಲಾ ಅಲಿಯಾಸ್ ಸಮೀರುಲ್ಲಾ ಖಾನ್ಗೆ ಶಿಕ್ಷೆಗೆ ಒಳಗಾದ ವ್ಯಕ್ತಿ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲಪಾಳ್ಯದಲ್ಲಿ ಬಟ್ಟೆ ಒಗೆಯುತಿದ್ದ ಮಹಿಳೆಯನ್ನ ಬೆದರಿಸಿ ಅತ್ಯಾಚಾರ ಮಾಡಿದ್ದನು. ತಪ್ಪಿಸಿಕೊಳ್ಳಲು ಯತ್ನಿಸಿದ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಕೊಲ್ಲುವ ಬೆದರಿಕೆ ಹಾಕಿದ್ದನು.

ಇದೀಗ 6ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ವಿ. ಚಂದ್ರಶೇಖರ್ ಶಿಕ್ಷೆ ಪ್ರಕಟ ಮಾಡಿದ್ದು, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು. ಈ ಪ್ರಕರಣಕ್ಕೆ ಆದಿನ ಗುಬ್ಬಿ ಸರ್ಕಲ್ ಇನ್ಸ್ಪೆಕ್ಟರ್ ರಂಗಸ್ವಾಮಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here