ಶಿರಾ | ಸೂಕ್ತ ಬಸ್ಗಳ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದು, ಬಸ್ ವ್ಯವಸ್ಥೆ ಸರಿ ಪಡಿಸಿಕೊಡಬೇಕೆಂದು ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡ ಆಲದಮರ ಬಳಿ ನಡೆದಿದೆ.

ಸೂಕ್ತವಾದ ಬಸ್ ವ್ಯವಸ್ತೆ ಇಲ್ಲದೆ ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಿರಾದಿಂದ ಬರುವ ಬಸ್ಗಳು ವಿದ್ಯಾರ್ಥಿಗಳಿಗೆ ಸ್ಟಾಪ್ ಕೊಡಲ್ಲ ಎಂದು ಆಕ್ರೋಶ ಪಡಿಸಿದ್ದಾರೆ. ನೂರಾರು ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.