CRIME NEWS | ಡಿಜೆ ಆಫ್ ಮಾಡಿದ್ದಕ್ಕೆ ಗ್ರಾಮದಲ್ಲಿ ನಡೆದೆ ಹೋಗ್ತು ಆಫ್ ಮರ್ಡರ್..!

0
18

ಶಿರಾ | ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಡಿಜೆ ಹಾಡಿನ ವಿಚಾರವಾಗಿ ಎರಡು ಗುಂಪುಗಳ ನಡುವೆ ಸಂಘರ್ಷ ನಡೆದಿದ್ದು, ಒಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.

ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದ್ದು, ಡಿಜೆಯನ್ನು ಆಫ್ ಮಾಡಿಸಿದ್ದಕ್ಕೆ ಕುಪಿತಗೊಂಡು ಗಲಾಟೆ ಮಾಡಿದ ಗೋವಿಂದರಾಜು, ಚಿಕ್ಕಣ್ಣನಿಗೆ ರೇಡಿಯಮ್ ಚಾಕುವಿನಿಂದ ಇರಿದಿದ್ದಾನೆ.
ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಚಿಕ್ಕಣ್ಣನನ್ನು ಶಿರಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ರಾತ್ರಿಯೇ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆರೋಪಿ ಗೋವಿಂದರಾಜುವನ್ನು ಶಿರಾ ನಗರ ಠಾಣಾ ಪೊಲೀಸರು ಬಂಧಿಸಿದ್ದು, ಡಿವೈಎಸ್ಪಿ ನವೀನ್ ಕುಮಾರ್ ನಗರ ಠಾಣಾ ಸಿಪಿಐ ಹನುಮಂತಪ್ಪ ಭೇಟಿ ನೀಡಿ ಗ್ರಾಮದಲ್ಲಿ ನಿನ್ನೆ ರಾತ್ರಿಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here