District collector’s move towards the village | ತುರುವೇಕೆರೆ ತಾಲೂಕಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ : ರೈತರ ಅಹವಾಲು ಸ್ವೀಕರಿಸಿದ ತಾಲೂಕು ದಂಡಾಧಿಕಾರಿ..!

0
22

ತುರುವೇಕೆರೆ | ತಾಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಚೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಏಳು ಹಳ್ಳಿಗಳಿಗೆ ಸುಮಾರು ಎರಡು ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು.

ಇನ್ನು ಇದೇ ಸಮಯದಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯನ್ನೇ ಕಾಣದ ಹಳ್ಳಿಗಳಿಗೆ, ಅಭಿವೃದ್ಧಿ ಮಾಡಲು ಗಮನಹರಿಸುತ್ತಿದ್ದು 21-22ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಯೋಜನೆಯಡಿ ಕೆ ಆರ್ ಐ ಡಿ ಎಲ್ ನ 50-54ರ ಅನುದಾನ ಮತ್ತು ಕಾವೇರಿ ನೀರಾವರಿ ನಿಗಮ ಹೇಮಾವತಿ ಯೋಜನೆ ಅಡಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ.

ಇದರಿಂದ ಹಳ್ಳಿಗಳಿಗೆ ಸಿಗಬೇಕಾದ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಜೊತೆಗೆ ಈ ಭಾಗದ ಹಳ್ಳಿಗಳು ಸುಮಾರು 25 ವರ್ಷಗಳಿಂದ ಅಭಿವೃದ್ಧಿ ಕಾಣದೆ ಮರೀಚಿಕೆಯಾಗಿತ್ತು. ಈ ಹಳ್ಳಿಗಳ ಅಭಿವೃದ್ಧಿಗೆ ಪಣತೊಟ್ಟು ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇನೆ ಎಂದು ಹೇಳಿದರು. ಇನ್ನು ಈ ಕಾರ್ಯಕ್ರಮದಲ್ಲಿ ತಾಲೂಕಿನ ದಂಡಾಧಿಕಾರಿ ವೈ ಎಂ ರೇಣು ಕುಮಾರ್ ಮತ್ತು ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಜರಿದ್ದು, ರೈತರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಇತ್ಯರ್ಥವಾಗುವ ಸಮಸ್ಯೆಗಳನ್ನ ಇತ್ಯರ್ಥಪಡಿಸಿ ಜೊತೆಗೆ ಇನ್ನೂ ಅನೇಕ ಆವಾಲುಗಳನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here